ಚಂದ್ರನ ಮೇಲೆ ನಡೆದಾಡಿದ ಭಾರತ : ಇಸ್ರೋ

ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಮಹಾತ್ವಾಕಾಂಕ್ಷೆಯ ಯೋಜನೆಯಾದ ಚಂದ್ರಯಾನ-3 ಯಶಸ್ಸು ಕಂಡಿದ್ದು, ನಿನ್ನೆ ಸಂಜೆ ಆರು ಗಂಟೆ ಸುಮಾರಿಗೆ ವಿಕ್ರಮ್ ಲ್ಯಾಂಡರ್ ಅನ್ನು ಸಾಫ್ಟ್ ಲ್ಯಾಂಡ್ ಮಾಡುವಲ್ಲಿ ನಮ್ಮ ವಿಜ್ಞಾನಿಗಳು ಯಶಸ್ವಿಯಾಗಿದ್ದಾರೆ. ಇದೀಗ ಮತ್ತೊಂದು ಸುದ್ದಿ ಹಂಚಿಕೊಂಡಿರುವ ಇಸ್ರೋ, ‘ಭಾರತದಲ್ಲಿ ತಯಾರಿಸಲಾಗಿದೆ; ಚಂದ್ರನಿಗಾಗಿ ಮಾಡಲ್ಪಟ್ಟಿದೆ. ಸಿ ಎಚ್-3 ರೋವರ್ ಲ್ಯಾಂಡರ್‌ನಿಂದ ಕೆಳಕ್ಕೆ ಇಳಿಯಿತು ಮತ್ತು ಚಂದ್ರನ ಮೇಲೆ ಭಾರತ ನಡೆದಾಡಿದೆ. ಹೆಚ್ಚಿನ ಮಾಹಿತಿಯನ್ನು ಶೀಘ್ರದಲ್ಲೇ ಹಂಚಿಕೊಳ್ಳಲಾಗುವುದು’ ಎಂದು ಟ್ವೀಟ್ ಮಾಡಿದೆ. ವಿಕ್ರಮ್ ಲ್ಯಾಂಡರ್ ನಿಂದ […]