ಮಹಿಳೆ ವಿವಸ್ತ್ರಗೊಳಿಸಿ ಮೆರವಣಿಗೆ ಪ್ರಕರಣ : ಕಾಕತಿ ಸಿಪಿಐ ಅಮಾನತು, ಬೆಳಗಾವಿಗೆ ಆಗಮಿಸಿದ ಕೇಂದ್ರ ಬಿಜೆಪಿ ತಂಡ

ಬೆಳಗಾವಿ: ಇಲ್ಲಿಯ ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ ಅಮಾನವೀಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಕತಿ ಠಾಣೆಯ ಪೊಲೀಸ್ ಇನ್ಸ್​ಪೆಕ್ಟರ್​ ವಿಜಯಕುಮಾರ ಸಿನ್ನೂರ ಅವರನ್ನು ಅಮಾನತುಗೊಳಿಸಿ ನಗರ ಪೊಲೀಸ್ ಆಯುಕ್ತ ಎಸ್ ಎನ್ ಸಿದ್ದರಾಮಪ್ಪ ಆದೇಶ ಹೊರಡಿಸಿದ್ದಾರೆ. ಹೈಕೋರ್ಟ್ ಈ ಸಂಬಂಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು, ಸರ್ಕಾರಕ್ಕೆ ಮತ್ತು ಪೊಲೀಸ್ ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತ್ತು. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ನಗರ ಪೊಲೀಸ್ ಆಯುಕ್ತ ಎಸ್ ಎನ್ ಸಿದ್ದರಾಮಪ್ಪ ಅವರು ಕಾಕತಿ ಸಿಪಿಐ […]