ಲೋಕಸಭೆ ಸಮರಕ್ಕೆ ‘ಕೈ’ ಪಡೆ ಸಜ್ಜು : ಬೆಂಗಳೂರಿನ ಮೂರು ಕ್ಷೇತ್ರ ಗೆಲ್ಲಲು ಮಾಸ್ಟರ್ ಪ್ಲಾನ್

ಬೆಂಗಳೂರು : ಮುಂಬರುವ ಲೋಕಸಭೆ ಚುನಾವಣೆಗೆ ರಾಜ್ಯ ಕಾಂಗ್ರೆಸ್ ಭರ್ಜರಿ ಸಿದ್ಧತೆ ಮಾಡಿಕೊಳ್ಳುತ್ತಿದೆ. ಈಗಾಗಲೇ ತೆರೆಮರೆಯಲ್ಲಿ ‘ಆಪರೇಷನ್ ಹಸ್ತ’ಕ್ಕೆ ಪ್ಲಾನ್ ಮಾಡುತ್ತಿರುವ ಕೈ ಪಡೆ, ಟಿಕೆಟ್ ಹಂಚಿಕೆ ಕುರಿತಾಗಿಯೂ ಲೆಕ್ಕಾಚಾರ ಹಾಕಲು ಪ್ರಾರಂಭಿಸಿದೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ 20ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆಲ್ಲಲೇಬೇಕೆಂದು ಕಾಂಗ್ರೆಸ್ ಪಣ ತೊಟ್ಟಿದೆ. ಅದರಲ್ಲೂ ಬೆಂಗಳೂರು ನಗರ ವ್ಯಾಪ್ತಿಯ ಕ್ಷೇತ್ರಗಳ ಮೇಲೆ ವಿಶೇಷ ಕಣ್ಣಿಟ್ಟಿದೆ. ಬೆಂಗಳೂರು ಉತ್ತರ, ದಕ್ಷಿಣ ಮತ್ತು ಕೇಂದ್ರ ಮೂರೂ ಕ್ಷೇತ್ರಗಳನ್ನು‌ ಗೆಲ್ಲಲು‌ ಯೋಜನೆ ರೂಪಿಸಿದೆ. ಕಳೆದ […]