Kirik Keerthi: ಕರಿಮಣಿ ಮಾಲೀಕ ನಾನಲ್ಲ! ಪ್ರೀತಿಸಿ ಮದುವೆಯಾದ ಪತ್ನಿ ಅರ್ಪಿತಾಗೆ ಡಿವೋರ್ಸ್ ನೀಡಿದ ಕಿರಿಕ್ ಕೀರ್ತಿ

Kirik Keerthi: ಪತ್ರಕರ್ತ, ನಿರೂಪಕ, ಬಿಗ್‌ಬಾಸ್ ಕನ್ನಡದ ಸ್ಪರ್ಧಿ, ಸಿನಿಮಾ ಹೀಗೆ ಹಲವು ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದ ಕಿರಿಕ್ ಕೀರ್ತಿ, ತಮ್ಮ ದಾಂಪತ್ಯದ ವಿಚಾರವಾಗಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಪತ್ನಿ ಅರ್ಪಿತಾ ಜತೆಗೆ ವಿಚ್ಛೇದನ ಪಡೆದಿರುವ ಸಂಗತಿಯನ್ನು ಬಹಿರಂಗಪಡಿಸಿದ್ದಾರೆ. ಈ ಹಿಂದೆಯೇ ಕಿರಿಕ್ ಕೀರ್ತಿ ಮತ್ತು ಅರ್ಪಿತಾ ನಡುವೆ ಯಾವುದೂ ಸರಿಯಿಲ್ಲ ಎಂಬ ವದಂತಿ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿತ್ತು. ಅದ್ಯಾವ ಮಟ್ಟಿಗೆ ಎಂದರೆ, ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರಕ್ಕೂ ಕೀರ್ತಿ ಬಂದಿದ್ದರಂತೆ. ಆಗ ಕೇಳಿ ಬಂದ ವದಂತಿಗೆ ಕೀರ್ತಿ […]