ದ್ವಿತೀಯ ಪಿಯುಸಿ ಎರಡನೇ ಪೂರಕ ಪರೀಕ್ಷೆ: ವಿದ್ಯಾರ್ಥಿಗಳಿಗೆ ಬಿಎಂಟಿಸಿಯಲ್ಲೂ ಉಚಿತ ಪ್ರಯಾಣ

ಬೆಂಗಳೂರು, ಆಗಸ್ಟ್ 18: ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಆಗಸ್ಟ್ 21 ರಿಂದ ಸೆಪ್ಟೆಂಬರ್ 2ರ ವರೆಗೆ ನಡೆಸುವ ದ್ವಿತೀಯ ಪಿಯುಸಿ ಎರಡನೇ ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬಿಎಂಟಿಸಿ (BMTC) ಉಚಿತ ಪ್ರಯಾಣದ ಅವಕಾಶ ನೀಡುತ್ತಿದೆ. ಕೆಎಸ್ ಆರ್ ಟಿಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವುದಾಗಿ ಹೇಳಿದ ಬೆನ್ನಲ್ಲೇ ಬಿಎಂಟಿಸಿ ಈ ನಿರ್ಧಾರ ಕೈಗೊಂಡಿದೆ. ದ್ವಿತೀಯ ಪಿಯುಸಿ 2ನೇ ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಸಹಕಾರಕ್ಕಾಗಿ […]
ರಾಜ್ಯಸಭೆಯ ಶೇ.12 ರಷ್ಟು ಸಂಸದರು ಕೋಟ್ಯಾಧಿಪತಿಗಳು, 75 ಸದಸ್ಯರ ವಿರುದ್ಧ ಕ್ರಿಮಿನಲ್ ಪ್ರಕರಣ

ನವದೆಹಲಿ: ರಾಜ್ಯಸಭೆಯ ಶೇ.12 ರಷ್ಟು ಹಾಲಿ ಸಂಸದರು ಕೋಟ್ಯಾಧಿಪತಿಗಳಾಗಿದ್ದು, ಆಂಧ್ರಪ್ರದೇಶ ಮತ್ತು ತೆಲಂಗಾಣ ಅತಿ ಹೆಚ್ಚು ಶ್ರೀಮಂತ ರಾಜ್ಯಸಭಾ ಸದಸ್ಯರನ್ನು ಹೊಂದಿವೆ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ವರದಿ ಮಾಡಿದೆ. ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ಮತ್ತು ನ್ಯಾಷನಲ್ ಎಲೆಕ್ಷನ್ ವಾಚ್ (NEW) ಒಟ್ಟು 233 ರಾಜ್ಯಸಭಾ ಸಂಸದರ ಪೈಕಿ 225 ಸದಸ್ಯರ ಅಪರಾಧ, ಹಣಕಾಸು ಮತ್ತು ಇತರ ವಿವರಗಳನ್ನು ವಿಶ್ಲೇಷಿಸಿದೆ. ಪ್ರಸ್ತುತ ರಾಜ್ಯಸಭೆಯಲ್ಲಿ ಒಂದು ಸ್ಥಾನ ಖಾಲಿ ಇದೆ. ವರದಿಯ ಪ್ರಕಾರ, ಆಂಧ್ರಪ್ರದೇಶದ […]
ಕಲಬುರ್ಗಿ, ಪನ್ಸಾರೆ, ದಾಭೋಲ್ಕರ್, ಗೌರಿ ಹತ್ಯೆ ಪ್ರಕರಣಗಳಲ್ಲಿ ‘ಸಾಮಾನ್ಯ ಸಂಬಂಧ’ವಿದೆಯೇ?: ಪರಿಶೀಲಿಸಲು CBIಗೆ ಸುಪ್ರೀಂ ಸೂಚನೆ

ನವದೆಹಲಿ: ಕರ್ನಾಟಕದ ಸಾಹಿತಿ ಎಂ.ಎಂ.ಕಲಬುರ್ಗಿ, ಲೇಖಕಿ ಗೌರಿ ಲಂಕೇಶ್ ಹಾಗೂ ಮಹಾರಾಷ್ಟ್ರದ ವಿಚಾರವಾದಿಗಳಾದ ಗೋವಿಂದ್ ಪನ್ಸಾರೆ, ನರೇಂದ್ರ ದಾಭೋಲ್ಕರ್ ಹತ್ಯೆಗಳ ನಡುವೆ ಪರಸ್ಪರ ಸಾಮಾನ್ಯ ಸಂಬಂಧವಿದೆಯೇ ಎಂಬುದರ ಕುರಿತು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಇಂದು (ಶುಕ್ರವಾರ) ಕೇಂದ್ರೀಯ ತನಿಖಾ ಸಂಸ್ಥೆಗೆ (ಸಿಬಿಐ) ಸೂಚಿಸಿತು. ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣದ ತನಿಖೆಯ ಮೇಲ್ವಿಚಾರಣೆ ಮಾಡಲು ಇದೇ ಏಪ್ರಿಲ್ 18ರಂದು ಬಾಂಬೆ ಹೈಕೋರ್ಟ್ ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ಅವರ ಪುತ್ರಿ ಮುಕ್ತಾ ದಾಭೋಲ್ಕರ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಇವರು […]
ಅಮೇಥಿಯಿಂದ ರಾಹುಲ್ ಗಾಂಧಿ , ವಾರಾಣಾಸಿಯಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧೆ

ಲಖನೌ: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ಭರ್ಜರಿ ತಯಾರಿ ನಡಸುತ್ತಿದೆ. ಇತ್ತ ರಾಹುಲ್ ಹಾಗೂ ಪ್ರಿಯಾಂಕಾ ಗಾಂಧಿ ಸ್ಪರ್ಧೆ ಕುರಿತು ಚರ್ಚೆಗಳು ಆರಂಭಗೊಂಡಿದೆ. 2024ರ ಲೋಕಸಭೆ ಚುನಾವಣೆಗೆ ರಾಹುಲ್ ಗಾಂಧಿ ಅಮೇಥಿಯಿಂದ ಸ್ಪರ್ಧಿಸಲಿದ್ದಾರೆ ಎಂದು ಉತ್ತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಅಜಯ್ ರೈ ಹೇಳಿದ್ದಾರೆ. ಪ್ರಿಯಾಂಕಾ ಗಾಂಧಿ ವಾರಣಾಸಿ ಸೇರಿ ಎಲ್ಲಿಬೇಕಾದರೂ ಸ್ಪರ್ಧಿಸಲಿ ಅವರನ್ನು ಗೆಲ್ಲಿಸಲು ಕಾರ್ಯಕರ್ತರು ಅವಿರತ ಪ್ರಯತ್ನ ಮಾಡಲಿದ್ದೇವೆ ಎಂದಿದ್ದಾರೆ. 2019ರಲ್ಲಿ ಪ್ರಿಯಾಂಕಾ ಗಾಂಧಿ ವಾರಣಾಸಿಯಿಂದ ಪ್ರಧಾನಿ ಮೋದಿ ವಿರುದ್ಧ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿಗಳು […]
RBI: ಸಾಲದ ದಂಡ ಶುಲ್ಕಕ್ಕೆ ಬಡ್ಡಿ ವಿಧಿಸುವಂತಿಲ್ಲ; ಆರ್ಬಿಐ ಹೊಸ ಮಾರ್ಗಸೂಚಿ ಜ.1 ರಿಂದ ಜಾರಿ

ನವದೆಹಲಿ: ಹಣಕಾಸು ಸಂಸ್ಥೆಗಳು ಸಾಲ ನೀಡುವ ಪ್ರಕ್ರಿಯೆಗಳಲ್ಲಿ ನ್ಯಾಯಸಮ್ಮತತೆ, ಪಾರದರ್ಶಕತೆ ಮತ್ತು ಉತ್ತರದಾಯಿತ್ವವನ್ನು ಉತ್ತೇಜಿಸುವ ಪ್ರಯತ್ನವಾಗಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ಸಾಲ ಖಾತೆಗಳಿಗೆ ದಂಡ ಶುಲ್ಕ ವಿಧಿಸುವ ಕುರಿತಂತೆ ಸಮಗ್ರ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಈ ಮಾರ್ಗಸೂಚಿಗಳು ಸಣ್ಣ ಹಣಕಾಸು ಬ್ಯಾಂಕುಗಳು, ಸ್ಥಳೀಯ ಬ್ಯಾಂಕುಗಳು ಮತ್ತು ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳು, ಪ್ರಾಥಮಿಕ ನಗರ ಸಹಕಾರಿ ಬ್ಯಾಂಕುಗಳು, ಬ್ಯಾಂಕೇತರ ಹಣಕಾಸು ಕಂಪನಿಗಳು (ಎನ್ಬಿಎಫ್ಸಿ) ಮತ್ತು ಅಖಿಲ ಭಾರತ ಹಣಕಾಸು ಸಂಸ್ಥೆಗಳು ಸೇರಿದಂತೆ ಎಲ್ಲ ವಾಣಿಜ್ಯ ಬ್ಯಾಂಕುಗಳಿಗೆ […]
ಪಿಎಂ ಕೇರ್ಸ್ ದುಡ್ಡಿನಿಂದ ಯಾರಿಗೆ ಲಾಭವಾಗುತ್ತಿದೆ? ; ಮೋದಿಗೆ ಸರಣಿ ಪ್ರಶ್ನೆಗಳ ಮುಂದಿಟ್ಟ ಸಿಎಂ ಸಿದ್ದು

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಭ್ರಷ್ಟಾಚಾರ ಸೇರಿ ಕಮಿಷನ್ ಆರೋಪ ಹೊರಿಸಿ ವಾಗ್ದಾಳಿ ನಡೆಸುತ್ತಿದೆ. ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ಮೋದಿ ಅವರಿಗೆ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಮಾನ್ಯ ಪ್ರಧಾನಿ ನರೇಂದ್ರ ಮೋದಿ ಅವರೇ, ಅಯೋಧ್ಯೆಯ ರಾಮ ಮಂದಿರ ನಿರ್ಮಾಣದಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿರುವ ಬಗ್ಗೆ ನಿಮ್ಮದೇ ಪರಿವಾರ ಆರೋಪಗಳನ್ನು ಮಾಡತೊಡಗಿದೆ. ‘ಪಿಎಂ ಕೇರ್ಸ್ ಫಂಡ್’ ಅನ್ನು ಸರ್ಕಾರದ್ದೆಂದು ಭಾವಿಸಿ ಮುಗ್ಧ ಜನತೆ ಅಪಾರ ಪ್ರಮಾಣದಲ್ಲಿ […]
India vs Ireland: ಮೊದಲ ಟಿ20 ಪಂದ್ಯದಲ್ಲಿ ಬೌಲಿಂಗ್ ಆಯ್ಕೆ ಮಾಡಿದ ಭಾರತ; ಟೀಮ್ ಇಂಡಿಯಾಗೆ ರಿಂಕು ಸಿಂಗ್, ಪ್ರಸಿದ್ಧ್ ಕೃಷ್ಣ ಪದಾರ್ಪಣೆ

India vs Ireland: ಟೀಮ್ ಇಂಡಿಯಾಗೆ ಇಂದು ಇಬ್ಬರು ಯುವ ಕ್ರಿಕೆಟಿಗರು ಪದಾರ್ಪಣೆ ಮಾಡುತ್ತಿದ್ದಾರೆ. ಇಂದಿನ ಪಂದ್ಯದ ಮೂಲಕ ಐಪಿಎಲ್ ಸೆನ್ಸೇಷನ್ ರಿಂಕು ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಪದಾರ್ಪಣೆ ಮಾಡುತ್ತಿದ್ದಾರೆ. ಇದೇ ವೇಳೆ ಪ್ರಸಿದ್ಧ್ ಕೃಷ್ಣ ಕೂಡಾ ಟಿ20 ಕ್ರಿಕೆಟ್ಗೆ ಪದಾರ್ಪಣೆ ಮಾಡುತ್ತಿದ್ದಾರೆ. ಇತ್ತೀಚೆಗೆ ಮುಕ್ತಾಯಗೊಂಡ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯನ್ನು ಸೋತಿರುವ ಟೀಮ್ ಇಂಡಿಯಾ, ಐರ್ಲೆಂಡ್ (Ireland vs India 1st T20I) ವಿರುದ್ಧ ಮತ್ತೊಂದು ವಿದೇಶಿ ಸರಣಿಯಲ್ಲಿ ಶುಕ್ರವಾರದಿಂದ (ಆಗಸ್ಟ್ 18) ಕಣಕ್ಕಿಳಿಯುತ್ತಿದೆ. […]
ಯಾರೂ ಪಕ್ಷ ಬಿಟ್ಟು ಹೋಗಲ್ಲ, ಮೈತ್ರಿ ಉಳಿಸಿಕೊಳ್ಳುವಲ್ಲಿ ಕಾಂಗ್ರೆಸ್ ವಿಫಲ: ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ : ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಗಂಭೀರ ಆರೋಪಗಳು ಕೇಳಿಬಂದಿವೆ. ದೂರು ಕೊಟ್ಟ ಗುತ್ತಿಗೆದಾರರನ್ನು ಪೊಲೀಸ್ ಠಾಣೆಗೆ ಕರೆಯಿಸಿ ವಿಚಾರಣೆ ನಡೆಸಲಾಗುತ್ತಿದೆ. ಆದ್ರೆ, ಗುತ್ತಿಗೆದಾರರನ್ನು ಹೆದರಿಸಿ, ಬೆದರಿಸಿ ಕೇಸ್ ಉಲ್ಟಾ ಹೊಡೆಯುವ ಹಾಗೆ ಮಾಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ನಗರದಲ್ಲಿಂದು ಮಾತನಾಡಿದ ಅವರು, “ಬಿಜೆಪಿಯಲ್ಲಿ ಉಸಿರುಗಟ್ಟುವ ವಾತಾವರಣವಿದೆ ಎಂದು ರಾಮಲಿಂಗಾರೆಡ್ಡಿಗೆ ಹೇಗೆ ಗೊತ್ತು?. ಅವರೇನು ಬಿಜೆಪಿ ಪಕ್ಷದಲ್ಲಿದ್ದಾರಾ?, ಸದ್ಯದಲ್ಲೇ ಪ್ರತಿಪಕ್ಷ ನಾಯಕನ ನೇಮಕವಾಗುತ್ತದೆ. ಚಲುವರಾಯಸ್ವಾಮಿ ಸೇರಿದಂತೆ ಮತ್ತೊಬ್ಬರ ಹೇಳಿಕೆಗೆ ನಾನು ಉತ್ತರ […]
JDS: ಕೋರ್ ಕಮಿಟಿಗೆ ಜಿಟಿಡಿ ಅಧ್ಯಕ್ಷ, ದತ್ತ ಸಂಚಾಲಕ, ಆಗಸ್ಟ್ 20ರಿಂದ ರಾಜ್ಯ ಪ್ರವಾಸ

ಬೆಂಗಳೂರು : ವಿಧಾನಸಭೆ ಚುನಾವಣೆಯಲ್ಲಿ ಸೋಲನುಭವಿಸಿದ ನಂತರ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು ನೀಡಿರುವ ಜೆಡಿಎಸ್, ಮುಂದಿನ ಚುನಾವಣೆಗಳನ್ನು ಸಮರ್ಥವಾಗಿ ಎದುರಿಸುವುದು, ಪಕ್ಷವನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಮಾಜಿ ಸಚಿವ ಹಾಗೂ ಶಾಸಕ ಜಿ.ಟಿ.ದೇವೇಗೌಡ ಅಧ್ಯಕ್ಷತೆಯಲ್ಲಿ ಜೆಡಿಎಸ್ನ ನೂತನ ಕಮಿಟಿ ರಚಿಸಿದೆ. ಪಕ್ಷದ ಕಚೇರಿ ಜೆ.ಪಿ.ಭವನದಲ್ಲಿ ಇಂದು ನಡೆದ ನಾಯಕರ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಿ.ಎಂ.ಇಬ್ರಾಹಿಂ, ಕೋರ್ ಕಮಿಟಿ ಅಧ್ಯಕ್ಷರಾಗಿ ಜಿ.ಟಿ.ದೇವೇಗೌಡ ಹಾಗೂ ಸಂಚಾಲಕರಾಗಿ ಮಾಜಿ ಶಾಸಕ ವೈ.ಎಸ್.ವಿ.ದತ್ತರನ್ನು ನೇಮಿಸಲಾಗಿದೆ ಎಂದರು. ಆಗಸ್ಟ್ 7ರಂದು ಪಕ್ಷದ […]
ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರವನ್ನು ಸಮರ್ಥಿಸಿಕೊಂಡ ಕಾಂಗ್ರೆಸ್

ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಜೆಡಿಎಸ್ ನ ನಾಯಕರು ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.ಇದೇ ವಿಚಾರವಾಗಿ ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೆಪಿಸಿಸಿ ಕಾರ್ಯದರ್ಶಿ ಲಕ್ಷ್ಮಣ್ ಹಾಗೂ ಮಾಜಿ ಎಂಎಲ್ಸಿ ರಮೇಶ್ ಬಾಬು ಬಿಜೆಪಿ ಹಾಗೂ ಜೆಡಿಎಸ್ ನಾಯಕರಿಗೆ ಕ್ಲಾಸ್ ತಗೆದುಕೊಂಡಿದ್ದಾರೆ.ಕಾವೇರಿ ನದಿ ನೀರು ಹಂಚಿಕೆ ಕೇಂದ್ರ ಸರ್ಕಾರಕ್ಕೆ ಬಿಟ್ಟಿದ್ದು ಮಾಜಿ ಸಿಎಂ ಬೊಮ್ಮಾಯಿ ಹಾಗೂ ಕುಮಾರಸ್ವಾಮಿ ಅವರಿಗೆ ಕಾಮನ್ ಸೆನ್ಸ್,ಕನಿಷ್ಠ ಜ್ಞಾನ ಇಲ್ಲದೆ ಲೋಕಸಭೆ ಚುನಾವಣೆಯ ದೃಷ್ಟಿಯಿಂದ ಬಾಯಿಗೆ […]