ಇಮ್ರಾನ್ ಖಾನ್ ಗೆ ತಪ್ಪದ ಸಂಕಷ್ಟ : ಒಂದೇ ದಿನ 9 ಜಾಮೀನು ಅರ್ಜಿಗಳು ತಿರಸ್ಕೃತ!

ಇಸ್ಲಾಮಾಬಾದ್ : ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಜಾಮೀನು ಕೋರಿ ಸಲ್ಲಿಸಿದ್ದ ಒಂಬತ್ತು ಅರ್ಜಿಗಳನ್ನು ಇಸ್ಲಾಮಾಬಾದ್‌ನ ಸ್ಥಳೀಯ ನ್ಯಾಯಾಲಯಗಳು ತಿರಸ್ಕರಿಸಿವೆ. ಹಿಂಸಾತ್ಮಕ ಪ್ರತಿಭಟನೆ ಆರೋಪದ ಮೇಲೆ ತನ್ನ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ಗಳನ್ನು ರದ್ದುಗೊಳಿಸುವಂತೆ ಇಮ್ರಾನ್ ಖಾನ್ ನ್ಯಾಯಾಲಯಗಳನ್ನು ಕೋರಿದ್ದರು. ಮಂಗಳವಾರ, ಇಸ್ಲಾಮಾಬಾದ್‌ನ ಭಯೋತ್ಪಾದನಾ ನಿಗ್ರಹ ನ್ಯಾಯಾಲಯ (ಎಟಿಸಿ) ಮೂರು ಜಾಮೀನು ಅರ್ಜಿಗಳನ್ನು ತಿರಸ್ಕರಿಸಿತು. ಏಕಕಾಲದಲ್ಲಿ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ (ಎಡಿಎಸ್‌ಜೆ) ಮೊಹಮ್ಮದ್ ಸೊಹೈಲ್ ಅವರು ಇಮ್ರಾನ್‌ ಖಾನ್‌ ನಿರೀಕ್ಷಣಾ ಜಾಮೀನು ಕೋರಿ […]

ಸಚಿವ ಎಸ್.ಎಸ್. ಮಲ್ಲಿಕಾರ್ಜುನ ರಾಜೀನಾಮೆಗೆ ಮಾಜಿ ಶಾಸಕ ಎನ್. ಮಹೇಶ್ ಒತ್ತಾಯ

ಚಾಮರಾಜನಗರ : ಸಂವಿಧಾನದ ಮೇಲೆ ನಂಬಿಕೆ ಇದ್ದರೆ ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಸಚಿವ ಎಸ್.ಎಸ್. ಮಲ್ಲಿಕಾರ್ಜುನ ರಾಜೀನಾಮೆಗೆ ಮಾಜಿ ಶಾಸಕ ಎನ್. ಮಹೇಶ್ ಆಗ್ರಹಿಸಿದ್ದಾರೆ. ದಲಿತರ ಕುರಿತು ಹಗುರವಾಗಿ ಮಾತಾಡಿರುವ ಎಸ್.ಎಸ್. ಮಲ್ಲಿಕಾರ್ಜುನ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಶಾಸಕ ಎನ್‌ ಮಹೇಶ್‌, ದಲಿತರ ಕುರಿತು ಹಗುರವಾಗಿ ಮಾತಾಡೋರಿಗೆ ಪಾಠವಾಗಬೇಕುನಾವು ಈ ದೇಶದ ಮೂಲ ನಿವಾಸಿಗಳು, ಅಸ್ಪೃಶ್ಯ ಸಮುದಾಯದ ನಾವು ಯಾರ ಮೇಲೂ ದಬ್ಬಾಳಿಕೆ, ದೌರ್ಜನ್ಯ ಮಾಡಿಲ್ಲ, ಪ್ರಾಮಾಣಿಕವಾಗಿ ದುಡಿದು ಬದುಕುತ್ತಿದ್ದೇವೆ, ಜಾತಿ […]

ರಾಜ್ಯ ರಾಜಕೀಯದಲ್ಲಿ ಮತ್ತೆ ಸಂಚಲನ ಮೂಡಿಸಿದ ಆಪರೇಷನ್, ಬಿಜೆಪಿ ಶಾಸಕರಿಗೆ ಕಾಂಗ್ರೆಸ್​ ಗಾಳ? ಲಿಸ್ಟ್​ನಲ್ಲಿ ಯಾರ್ಯಾರು?

ಬೆಂಗಳೂರು ; ಆ.17 : ಕರ್ನಾಟಕದಲ್ಲಿ (Karnataka Politics) ಮತ್ತೆ ಆಪರೇಷನ್ (Operation Hasta) ಬಿರುಗಾಳಿ ಎದ್ದಿದೆ. ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಬಹುಮತದಿಂದ ಗೆದ್ದು ಅಧಿಕಾರದ ಗದ್ದುಗೆ ಏರಿರುವ ಕಾಂಗ್ರೆಸ್ ಈಗ ಲೋಕಸಭೆ ಚುನಾವಣೆಗೆ (Loksabha Elections 2023) ಸಿದ್ಧವಾಗುತ್ತಿದೆ. ಲೋಕಸಭೆ ಗೆಲುವಿನ ತಂತ್ರದ ಭಾಗವಾಗೇ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivakumar) ಭರ್ಜರಿ ಪ್ಲ್ಯಾನ್ ರೂಪಿಸಿದ್ದು.. ಖುದ್ದು ಡಿಕೆ ಶಿವಕುಮಾರ್ ಆಪರೇಷನ್ ಸುಳಿವು ಬಿಟ್ಟು ಕೊಟ್ಟಿದ್ದಾರೆ. ಇನ್ನು ಕಾಂಗ್ರೆಸ್ ಆಪರೇಷನ್​ಗೆ ಇಂಬುಕೊಡುವಂತೆ ಡಿಕೆ ಸಹೋದರ […]

ಹಿಂದೂ ಧರ್ಮ ಇಸ್ಲಾಂಗಿಂತ ಹಳೆಯದು, ಮೊದಲು ಮುಸ್ಲಿಮರು ಹಿಂದೂಗಳಾಗಿದ್ದರು: ಗುಲಾಂ ನಬಿ ಆಜಾದ್

ಹಿಂದೂ ಧರ್ಮ ಇಸ್ಲಾಂಗಿಂತ ಹಳೆಯದು, ಮೊದಲು ಮುಸ್ಲಿಮರು ಹಿಂದೂಗಳಾಗಿದ್ದರು ಎಂಬ ಹೇಳಿಕೆಯನ್ನು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಗುಲಾಂ ನಬಿ ಆಜಾದ್ ಹೇಳಿದ್ದಾರೆ. ಇಸ್ಲಾಂ ಹುಟ್ಟಿದ್ದು 1500 ವರ್ಷಗಳ ಹಿಂದೆ, ಭಾರತದ ಯಾರೂ ಹೊರಗಿನವರಲ್ಲ, ನಾವೆಲ್ಲರೂ ಈ ದೇಶಕ್ಕೆ ಸೇರಿದವರು, ಭಾರತದ ಮುಸ್ಲಿಮರು ಮೂಲತಃ ಹಿಂದೂಗಳು, ನಂತರ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡರು ಎಂದಿದ್ದಾರೆ. ಹಿಂದೂ ಧರ್ಮ ಇಸ್ಲಾಂಗಿಂತ ಹಳೆಯದು, ಮೊದಲು ಮುಸ್ಲಿಮರು ಹಿಂದೂಗಳಾಗಿದ್ದರು ಎಂಬ ಹೇಳಿಕೆಯನ್ನು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಗುಲಾಂ ನಬಿ […]

ಕೊಡಗು, ಮೈಸೂರು, ದಾವಣಗೆರೆ ಸೇರಿ ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ : ಎಲ್ಲೆಲ್ಲಿ ಏನೇನು ಸಿಕ್ತು ?

ಬೆಂಗಳೂರು: ಆದಾಯಕ್ಕಿಂತ ಹೆಚ್ಚಿಗೆ ಅಕ್ರಮ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆ ಶಿವಮೊಗ್ಗ , ಚಿಕ್ಕಬಳ್ಳಾಪುರ, ದೇವನಹಳ್ಳಿ, ಕೊಡಗು, ಮೈಸೂರು, ದಾವಣಗೆರೆ, ಬೀದರ್‌ ಸೇರಿ ವಿವಿಧೆಡೆ ಏಕಕಾಲದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಚಿಕ್ಕಜಾಲ ಗ್ರಾಮ ಪಂಚಾಯತಿ ಸದಸ್ಯ ಲಕ್ಷ್ಮಿಪತಿ ಮನೆ ಫಾರ್ಮ್‌ ಹೌಸ್ ಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಕೊಡೂರು ಗ್ರಾಮದ ಬಳಿ ಈ ಫಾರ್ಮ್‌ ಹೌಸ್‌ ಇದೆ. ಪತ್ನಿ ಆರತಿ ಹೆಸರಿನಲ್ಲಿ ನಾಲ್ಕು ಎಕರೆ ಇರುವ ಜಮೀನು […]

400 ಕೋಟಿ ರೂಪಾಯಿ ಕ್ಲಬ್ ಸೇರಿದ ‘ಜೈಲರ್’ ಸಿನಿಮಾ; ಕರ್ನಾಟಕದಲ್ಲಿ ಎಷ್ಟು ಗಳಿಕೆ?

ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನದಲ್ಲಿ ಮೂಡಿ ಬಂದ ‘ಜೈಲರ್’ ಸಿನಿಮಾ ತಮಿಳುನಾಡಿನಲ್ಲಿ ಅಬ್ಬರಿಸಿದೆ. ಈ ಸಿನಿಮಾ ತಮಿಳುನಾಡಿನಲ್ಲಿ ಆರು ದಿನಕ್ಕೆ 134 ಕೋಟಿ ರೂಪಾಯಿ ಬಾಚಿಕೊಂಡಿದೆ. ಆಂಧ್ರ ಪ್ರದೇಶ-ನಿಜಾಮ್ ಭಾಗದಲ್ಲಿ ಸಿನಿಮಾಗೆ 49 ಕೋಟಿ ರೂಪಾಯಿ ಗಳಿಕೆ ಆಗಿದೆ. ನಟ ರಜನಿಕಾಂತ್ ನಟನೆಯ ‘ಜೈಲರ್’ ಸಿನಿಮಾ (Jailer Movie) ಆಗಸ್ಟ್ 10ರಂದು ವಿಶ್ವಾದ್ಯಂತ ರಿಲೀಸ್ ಆಯಿತು. ಮಲ್ಟಿ ಸ್ಟಾರರ್ ಸಿನಿಮಾ ಎನ್ನುವ ಕಾರಣಕ್ಕೆ ಸಿನಿಮಾ ಮೇಲೆ ಹೆಚ್ಚು ನಿರೀಕ್ಷೆ ಇತ್ತು. ಹೀಗಾಗಿ, ಈ ಚಿತ್ರಕ್ಕೆ ಮೊದಲ ದಿನವೇ ಭರ್ಜರಿ ಸ್ವಾಗತ ಸಿಕ್ಕಿತು. ಬಾಕ್ಸ್ […]

ನಮ್ಮ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಕಾಪಾಡಿಕೊಳ್ಳುವುದೇ ಸಂಗೊಳ್ಳಿರಾಯಣ್ಣನಿಗೆ ನಾವು ನೀಡುವ ನಿಜವಾದ ಗೌರವ : ಮುಖ್ಯಮಂತ್ರಿ ಸಿದ್ದರಾಮಯ್ಯ

ನಿಜವಾದ ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸುವ ಬ್ರಿಟಿಷರ ಏಜೆಂಟರ ಬಗ್ಗೆ ಎಚ್ಚರವಿರಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ಆ.16: ಸ್ವಾತಂತ್ರ್ಯವೀರ ಸಂಗೊಳ್ಳಿರಾಯಣ್ಣನನ್ನು ಬ್ರಿಟಿಷರಿಗೆ ಹಿಡಿದುಕೊಟ್ಟವರು ನಮ್ಮವರೇ. ಈಗಲೂ ಬ್ರಿಟಿಷರ ಏಜೆಂಟರುಗಳು ಇದ್ದಾರೆ. ಅವರು ನಮ್ಮ ನಿಜವಾದ ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸುತ್ತಾರೆ. ಇಂಥವರ ಬಗ್ಗೆ ಎಚ್ಚರದಿಂದ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಪ್ರತಿಷ್ಠಾನ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ ನಡೆದ ಕ್ರಾಂತಿವೀರ ಸಂಗೊಳ್ಳಿರಾಯಣ್ಣನವರ 226 ನೇ ಜಯಂತೋತ್ಸವದಲ್ಲಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ […]

ಬೆಂಗಳೂರಿನಲ್ಲಿ ಹೆಚ್ಚಿದ ಪುಂಡರ ಅಟ್ಟಹಾಸ ; ನಿಂತಿದ್ದ ವಾಹನದ ಮೇಲೆ ಕಲ್ಲು ಎತ್ತಿಹಾಕಿ ಗ್ಲಾಸ್ ಪುಡಿ ಮಾಡಿದ ದುಷ್ಕರ್ಮಿಗಳು

ಬೆಂಗಳೂರು August:16: ನಿಂತಿರುವ ವಾಹನದ ಮೇಲೆ ಸೈಜು ಕಲ್ಲು ಎತ್ತಿಹಾಕಿ ದುಷ್ಕರ್ಮಿಗಳು ಗ್ಲಾಸ್ ಪುಡಿ ಮಾಡಿದ ಘಟನೆ ಕೆಂಗೇರಿ(Kengeri) ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೈಕ್​ನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಫುಟ್​ಪಾತ್ ಮೇಲಿನ ಕಲ್ಲನ್ನು ತೆಗೆದುಕೊಂಡು ರಸ್ತೆ ಪಕ್ಕದಲ್ಲಿ ನಿಂತಿದ್ದ ಹತ್ತಕ್ಕೂ ಹೆಚ್ಚು ವಾಹನಗಳ ಗ್ಲಾಸ್ ಹೊಡೆದಾಕಿ, ಏನೂ ಗೊತ್ತಿಲ್ಲವೆಂಬಂತೆ ಎಸ್ಕೇಪ್ ಆಗಿದ್ದಾರೆ. ಈ ಕುರಿತು ವಾಹನ ಮಾಲೀಕರು ಕೆಂಗೇರಿ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳ ಪತ್ತೆಗೆ ಮುಂದಾಗಿದ್ದಾರೆ.

ಬಿಜೆಪಿ ಶಾಸಕ Vs ಬಿಜೆಪಿ ಸಂಸದ ; ‘ ಭಗವಂತ್ ಖೂಬಾ ಗುಂಡಾಗಳನ್ನ ಹಾಕ್ಕೊಂಡು ತಿರುಗುತ್ತಿದ್ದಾರೆ’ ಎಂದ ಪ್ರಭು ಚೌವ್ಹಾಣ್!

ಬೆಂಗಳೂರು: ಬೀದರ್ ಜಿಲ್ಲೆಯಲ್ಲಿ ಬಿಜೆಪಿ ಶಾಸಕ v/s ಬಿಜೆಪಿ ಎಂಪಿ ಜಗಳ ತಾರಕಕ್ಕೇರಿದ್ದು, ಲೋಕಸಭಾ ಸದಸ್ಯ, ಕೇಂದ್ರ ಸಚಿವ ಭಗವಂತ್ ಖೂಬಾ ಮತ್ತು ಔರಾದ್ ಶಾಸಕ ಪ್ರಭು ಚೌವ್ಹಾಣ್ ನಡುವಿನ ಮನಸ್ಥಾಪ ಬೀದಿಗೆ ಬಂದು ನಿಂತಿದೆ. ಸಚಿವ ಖೂಬಾ ಆರೋಪಗಳಿಗೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಚೌವ್ಹಾಣ್, ಭಗವಂತ್ ಖೂಬಾ ಹಾಗೂ ಬೆಂಬಲಿಗರಿಂದ ನನಗೆ, ನನ್ನ ಕುಟುಂಬಕ್ಕೆ, ಬೆಂಬಲಿಗರಿಗೆ ಜೀವ ಬೆದರಿಕೆ ಇದೆ ಎಂದು ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಬೀದರ್ ಎಸ್‌ಪಿ ಹಾಗೂ ಐಜಿಗೆ ಪತ್ರ ಅವರು […]

ಇಂದು ಬೆಂಗಳೂರು, ಕೋಲಾರ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕಾಂಗ್ರೆಸ್ ಶಾಸಕರ ಸಭೆ

ಬೆಂಗಳೂರು : August 16: CM ಸಿದ್ದರಾಮಯ್ಯ ಹಾಗೂ DCM ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಶಾಸಕರು, ಸಚಿವರು ಮತ್ತು ಜಿಲ್ಲಾ ಮುಖಂಡರ ಸಭೆ ಇಂದೂ ಕೂಡ ಮುಂದುವರಿದಿದ್ದು, ಬೆಂಗಳೂರು, ಕೋಲಾರ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಮುಖಂಡರ ಸಭೆ ಇಂದು ನಡೆಯಲಿದೆ. ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣದಲ್ಲಿ ಇಂದು ಬೆಳಗ್ಗೆ ಬೆಂಗಳೂರು ನಗರ ಜಿಲ್ಲೆ ಶಾಸಕರ ಸಭೆ ನಡೆಯಲಿದೆ. ಸಂಜೆ 4 ಗಂಟೆಗೆ ಕೋಲಾರ ಜಿಲ್ಲೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರು ಮತ್ತು ಸಚಿವರು ಸಭೆಯಲ್ಲಿ ಭಾಗವಹಿಸಲಿದ್ದಾರೆ. […]