ಇಸ್ರೋ ಕೇಂದ್ರಕ್ಕೆ ಸಿಎಂ ಭೇಟಿ; ವಿಜ್ಞಾನಿಗಳಿಗೆ ಸಿಹಿಹಂಚಿ ಅಭಿನಂದನೆ!

ಬೆಂಗಳೂರು: ಚಂದ್ರನ ಮೇಲೆ ಇಳಿದು ಇತಿಹಾಸ ಬರೆದಿರುವ ಇಸ್ರೋ ವಿಜ್ಞಾನಿಗಳ ಕಾರ್ಯಕ್ಕೆ ಎಲ್ಲೆಡೆ ಭಾರೀ ಪ್ರಶಂಸೆ ಕೇಳಿಬರುತ್ತಿದೆ. ಈ ನಡುವೆ ಇಸ್ರೋ ವಿಜ್ಞಾನಿಗಳನ್ನು ಸಿಎಂ ಸಿದ್ದರಾಮಯ್ಯ ಇಂದು ಭೇಟಿಯಾಗಿದ್ದಾರೆ. ಬೆಂಗಳೂರು ಕಚೇರಿಗೆ ಆಗಮಿಸಿದ ಸಿಎಂ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿ ಸನ್ಮಾನಿಸಿದರು. ನಗರದ ಪೀಣ್ಯ ಬಳಿ ಇರುವ ಇಸ್ರೋ ಕಮಾಂಡಿಂಗ್ ಸೆಂಟರ್‌ಗೆ ಭೇಟಿ ನೀಡಿ ಚಂದ್ರಯಾನ-3ರ ಸಂಪೂರ್ಣ ಜವಾಬ್ದಾರಿ ಹೊತ್ತಿರುವ ಇಸ್ರೋ ಅಧ್ಯಕ್ಷ ಎಸ್. ಸೋಮನಾಥ್ ಅವರನ್ನು ಅಭಿನಂದಿಸಿದ್ದಾರೆ. ಜೊತೆಗೆ ಚಂದ್ರಯಾನ್ ಯೋಜನೆಗೆ ಪ್ರಮುಖ ಪಾತ್ರ ವಹಿಸಿದ್ದ ಎಲ್ಲಾ […]