ನಮ್ಮ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಕಾಪಾಡಿಕೊಳ್ಳುವುದೇ ಸಂಗೊಳ್ಳಿರಾಯಣ್ಣನಿಗೆ ನಾವು ನೀಡುವ ನಿಜವಾದ ಗೌರವ : ಮುಖ್ಯಮಂತ್ರಿ ಸಿದ್ದರಾಮಯ್ಯ

ನಿಜವಾದ ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸುವ ಬ್ರಿಟಿಷರ ಏಜೆಂಟರ ಬಗ್ಗೆ ಎಚ್ಚರವಿರಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ಆ.16: ಸ್ವಾತಂತ್ರ್ಯವೀರ ಸಂಗೊಳ್ಳಿರಾಯಣ್ಣನನ್ನು ಬ್ರಿಟಿಷರಿಗೆ ಹಿಡಿದುಕೊಟ್ಟವರು ನಮ್ಮವರೇ. ಈಗಲೂ ಬ್ರಿಟಿಷರ ಏಜೆಂಟರುಗಳು ಇದ್ದಾರೆ. ಅವರು ನಮ್ಮ ನಿಜವಾದ ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸುತ್ತಾರೆ. ಇಂಥವರ ಬಗ್ಗೆ ಎಚ್ಚರದಿಂದ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಪ್ರತಿಷ್ಠಾನ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ ನಡೆದ ಕ್ರಾಂತಿವೀರ ಸಂಗೊಳ್ಳಿರಾಯಣ್ಣನವರ 226 ನೇ ಜಯಂತೋತ್ಸವದಲ್ಲಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ […]