ಕಾವೇರಿ ನದಿನೀರು ಹಂಚಿಕೆ ವಿವಾದ; ಪ್ರತ್ಯೇಕ ಪೀಠ ರಚನೆಗೆ ಸುಪ್ರೀಂ ಒಪ್ಪಿಗೆ

ಬೆಂಗಳೂರು: ಕರ್ನಾಟಕ ಮತ್ತು ತಮಿಳುನಾಡು ನಡುವೆ ಭುಗಿಲೆದ್ದಿರುವ ಕಾವೇರಿ ನೀರು ಹಂಚಿಕೆ ವಿವಾದದ ತುರ್ತು ವಿಚಾರಣೆಗೆ ಅಸ್ತು ಎಂದಿರುವ ಸುಪ್ರೀಕೋರ್ಟ್, ವಿಚಾರಣೆ ನಡೆಸಲು ಪ್ರತ್ಯೇಕ ಪೀಠ ರಚಿಸಲಾಗುವುದು, ಅಲ್ಲಿ ಎಲ್ಲ ವಿಚಾರಣೆ ನಡೆಯಲಿದೆ ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಹೇಳಿದ್ದಾರೆ. ಪ್ರಕರಣದ ತುರ್ತು ವಿಚಾರಣೆ ನಡೆಸುವಂತೆ ತಮಿಳುನಾಡು ಸರ್ಕಾರ ಸುಪ್ರೀಂನಲ್ಲಿ ಮನವಿ ಮಾಡಿತ್ತು. ವಿಚಾರಣೆಗೆ ಒಪ್ಪಿಗೆ ನೀಡಿಡುರುವ ಸಿಜೆಐ, ವಿಚಾರಣೆ ನಡೆಸಲು ಪ್ರತ್ಯೇಕ ಪೀಠ ರಚಿಸುವ ಭರವಸೆ ನೀಡಿದ್ದಾರೆ. ಕಾವೇರಿ ನೀರಿನ ಸಂಬಂಧ ಕರ್ನಾಟಕದಿಂದಲೂ ಅರ್ಜಿ […]
16-18 ವರ್ಷ ವಯಸ್ಸಿನವರ ನಡುವಣ ಸಮ್ಮತಿಯ ಲೈಂಗಿಕ ಕ್ರಿಯೆ ಅಪರಾಧವಲ್ಲ ಎಂದು ಮಾಡಬಹುದೇ? ಕೇಂದ್ರದ ಅಭಿಪ್ರಾಯ ಕೇಳಿದ ಸುಪ್ರೀಂ

ದೆಹಲಿ, ಆ.19: 16 ರಿಂದ 18 ವರ್ಷ ವಯಸ್ಸಿನ ಹದಿಹರೆಯದವರು ಸಮ್ಮತಿಯಿಂದ ಲೈಂಗಿಕ ಕ್ರಿಯೆಯಲ್ಲಿ ( Consensual sex) ತೊಡಗಿಕೊಂಡಿದ್ದರೆ, ಅದನ್ನು ಅತ್ಯಾಚಾರದ ಅಪರಾಧ ಎಂದು ಹೇಳುವ ಕಾನೂನನ್ನು ಅಮಾನ್ಯಗೊಳಿಸುವ ನಿರ್ದೇಶನವನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸುವ ವೇಳೆ, ಈ ಬಗ್ಗೆ ಕೇಂದ್ರ ಅಭಿಪ್ರಾಯ ಏನು? ಎಂಬುದನ್ನು ಕೂಡ ಕೇಳಬೇಕು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಕೇಂದ್ರದ ಅಭಿಪ್ರಾಯ ಕೇಳಿದ್ದು, ಸರ್ಕಾರ ಸೇರಿದಂತೆ ಕೆಲವು ಶಾಸನಬದ್ಧ ಸಂಸ್ಥೆಗಳಿಗೆ ನೋಟಿಸ್ ಜಾರಿ ಮಾಡಿದೆ. ಮುಖ್ಯ […]
ಕಲಬುರ್ಗಿ, ಪನ್ಸಾರೆ, ದಾಭೋಲ್ಕರ್, ಗೌರಿ ಹತ್ಯೆ ಪ್ರಕರಣಗಳಲ್ಲಿ ‘ಸಾಮಾನ್ಯ ಸಂಬಂಧ’ವಿದೆಯೇ?: ಪರಿಶೀಲಿಸಲು CBIಗೆ ಸುಪ್ರೀಂ ಸೂಚನೆ

ನವದೆಹಲಿ: ಕರ್ನಾಟಕದ ಸಾಹಿತಿ ಎಂ.ಎಂ.ಕಲಬುರ್ಗಿ, ಲೇಖಕಿ ಗೌರಿ ಲಂಕೇಶ್ ಹಾಗೂ ಮಹಾರಾಷ್ಟ್ರದ ವಿಚಾರವಾದಿಗಳಾದ ಗೋವಿಂದ್ ಪನ್ಸಾರೆ, ನರೇಂದ್ರ ದಾಭೋಲ್ಕರ್ ಹತ್ಯೆಗಳ ನಡುವೆ ಪರಸ್ಪರ ಸಾಮಾನ್ಯ ಸಂಬಂಧವಿದೆಯೇ ಎಂಬುದರ ಕುರಿತು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಇಂದು (ಶುಕ್ರವಾರ) ಕೇಂದ್ರೀಯ ತನಿಖಾ ಸಂಸ್ಥೆಗೆ (ಸಿಬಿಐ) ಸೂಚಿಸಿತು. ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣದ ತನಿಖೆಯ ಮೇಲ್ವಿಚಾರಣೆ ಮಾಡಲು ಇದೇ ಏಪ್ರಿಲ್ 18ರಂದು ಬಾಂಬೆ ಹೈಕೋರ್ಟ್ ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ಅವರ ಪುತ್ರಿ ಮುಕ್ತಾ ದಾಭೋಲ್ಕರ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಇವರು […]