ಗೊಲ್ಲರಹಟ್ಟಿಯಲ್ಲಿ ಮರುಕಳಿಸಿದ ಮೌಢ್ಯಾಚರಣೆ… ಊರಿಂದ ಹೊರಗೆ ಗುಡಿಸಲಲ್ಲಿ ಇರಿಸಿದ್ದ ಬಾಣಂತಿ, ಶಿಶು ರಕ್ಷಿಸಿದ ಜಡ್ಜ್!

ತುಮಕೂರು: ಮೂಢನಂಬಿಕೆ ಪಾಲಿಸಲು ಬಾಣಂತಿ ಹಾಗೂ ಶಿಶುವನ್ನು ಊರಿನಿಂದ ಹೊರಗಿಟ್ಟಾಗ ಜಿಲ್ಲೆಯ ಗೊಲ್ಲರಹಟ್ಟಿ ಸಮೀಪ ಮಗು ಮೃತಪಟ್ಟು ಬಾಣಂತಿ ನರಳಾಡಿದ ಘಟನೆ ಮಾಸುವ ಮುನ್ನವೇ ಮತ್ತೊಂದು ಇದೇ ರೀತಿಯ ಪ್ರಕರಣ ಬೆಳಕಿಗೆ ಬಂದಿದೆ. ಮತ್ತೊಬ್ಬ ಬಾಣಂತಿಯನ್ನು ಗ್ರಾಮದಿಂದ ಹೊರಗಿಡಲಾಗಿದ್ದು, ನ್ಯಾಯಾಧೀಶರು ಮಧ್ಯಪ್ರವೇಶಿಸಿ ಮೌಢ್ಯಾಚರಣೆಗೆ ತಡೆಯೊಡ್ಡಿದ ಘಟನೆ ಗುಬ್ಬಿ ತಾಲೂಕಿನ ವರದೇನಹಳ್ಳಿ ಗೊಲ್ಲರಹಟ್ಟಿಯಲ್ಲಿ ನಡೆದಿದೆ. ಬಾಣಂತಿಯನ್ನು ಹೊರಗಿಟ್ಟಿರುವ ಬಗ್ಗೆ ಬುಧವಾರ ಮಾಹಿತಿ ತಿಳಿದು ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ಗುಬ್ಬಿ ನ್ಯಾಯಾಲಯದ ನ್ಯಾಯಾಧೀಶರಾದ ಉಂಡಿ ಮಂಜುಳ ಶಿವಪ್ಪ ಅವರು […]