ಬೆಂಗಳೂರು : ಡಿ. 22; ಕೋಲಾರ ಜಿಲ್ಲೆಯ ಯಲವಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆ (Morarji Desai Residential School) ಮಕ್ಕಳನ್ನು ಮಲದ ಗುಂಡಿಗೆ ಇಳಿಸಿ ಸ್ವಚ್ಛ ಮಾಡಿಸಿದ (Manual Scavenging) ಪ್ರಕರಣ ಮಾಸುವ ಮುನ್ನವೇ ರಾಜಧಾನಿ ಬೆಂಗಳೂರಿನಲ್ಲಿ ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛತೆ (Toilet Cleaning) ಮಾಡಿಸಲಾಗಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ ಶಿವಕುಮಾರ್ ಅವರು ಬಿಬಿಎಂಪಿ, ಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆ ಕರೆದಿದ್ದಾರೆ.
ಇಂದು ವಿಧಾನಸೌಧದಲ್ಲಿ ಬಿಬಿಎಂಪಿ, ಶಿಕ್ಷಣ ಇಲಾಖೆ ಅಧಿಕಾರಿಗಳ ಜತೆ ಸಭೆ ಡಿಸಿಎಂ ಡಿ.ಕೆ.ಶಿವಕುಮಾರ್ ಸಭೆ ಮಾಡಲಿದ್ದು, ಅಂದ್ರಹಳ್ಳಿ ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನಿಂಗ್ ಮಾಡಿಸಿರುವುದ ವರದಿ ಪಡೆದುಕೊಳ್ಳಲಿದ್ದಾರೆ. ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ನಿರ್ಧರಿಸಿದ್ದಾರೆ.
ಸಭೆಗೂ ಮುನ್ನ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ಘಟನೆ ಸಂಬಂಧ ಸಭೆ ಕರೆದಿದ್ದೇನೆ. ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆ ಇಲ್ಲ. ಇತ್ತೀಚೆಗೆ ಆದ ಘಟನೆ ಬಗ್ಗೆಯೂ ಕ್ರಮ ತೆಗೆದುಕೊಂಡಿದ್ದೇವೆ. ಶಾಲಾ ಮಕ್ಕಳನ್ನು ಯಾರೂ ದುರುಪಯೋಗ ಮಾಡಿಕೊಳ್ಳಬಾರದು. NSS ಇತ್ತು, ಗಿಡ ನೆಡುವುದು, ಸ್ವಚ್ಛತೆ ಮಾಡುವ ಕೆಲಸ ಮಾಡುತ್ತಿದ್ದರು. ಆದ್ರೆ ಶೌಚಾಲಯ ಕ್ಲೀನ್ ಮಾಡಿಸುವ ಅಧಿಕಾರ ಯಾರಿಗೂ ಕೊಟ್ಟಿಲ್ಲ ಎಂದು ಖಡಕ್ ಆಗಿ ಹೇಳಿದರು.
ಮಕ್ಕಳಿಗೆ ಶಕ್ತಿಕೊಡುವ ಕೆಲಸ ಮಾಡಬೇಕು. ಶಾಲೆಯಲ್ಲಿ ಕಮಿಟಿ ಇದೆ. ಸ್ವಚ್ಛತೆ ಮಾಡುವ ಸಂದರ್ಭದಲ್ಲಿ ಅವರು ಕ್ರಮ ವಹಿಸಬೇಕು. ಮಕ್ಕಳನ್ನು ದುರುಪಯೋಗ ಮಾಡುವುದನ್ನು ತಡೆಯಬೇಕಿದೆ. ಎನ್‌ಎಸ್‌ಎಸ್ ಆ ಜಾಗವನ್ನು ಸ್ವಚ್ಛತೆ ಮಾಡುವುದು, ಗಿಡ ನೆಡುವುದನ್ನು ಮಾಡುತ್ತಿದ್ದರು. ಈಗ ಶೌಚಾಲಯ ಸ್ವಚ್ಛತೆ ಮಾಡುವುದಕ್ಕೆ ಬಿಡೋದಿಲ್ಲ. ಮುಂದಕ್ಕೂ ಬಿಡುವುದಿಲ್ಲ. ಏನು ಕ್ರಮ ಕೈಗೊಳ್ಳಬೇಕೋ ಅದನ್ನು ಕೈಗೊಳ್ಳುತ್ತೇವೆ ಎಂದರು.