KRGRV
Monday, December 23, 2024
HomeCrimeಮಹಿಳೆ ವಿವಸ್ತ್ರಗೊಳಿಸಿ ಮೆರವಣಿಗೆ ಪ್ರಕರಣ : ಕಾಕತಿ ಸಿಪಿಐ ಅಮಾನತು, ಬೆಳಗಾವಿಗೆ ಆಗಮಿಸಿದ ಕೇಂದ್ರ ಬಿಜೆಪಿ...

ಮಹಿಳೆ ವಿವಸ್ತ್ರಗೊಳಿಸಿ ಮೆರವಣಿಗೆ ಪ್ರಕರಣ : ಕಾಕತಿ ಸಿಪಿಐ ಅಮಾನತು, ಬೆಳಗಾವಿಗೆ ಆಗಮಿಸಿದ ಕೇಂದ್ರ ಬಿಜೆಪಿ ತಂಡ

ಬೆಳಗಾವಿ: ಇಲ್ಲಿಯ ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ ಅಮಾನವೀಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಕತಿ ಠಾಣೆಯ ಪೊಲೀಸ್ ಇನ್ಸ್​ಪೆಕ್ಟರ್​ ವಿಜಯಕುಮಾರ ಸಿನ್ನೂರ ಅವರನ್ನು ಅಮಾನತುಗೊಳಿಸಿ ನಗರ ಪೊಲೀಸ್ ಆಯುಕ್ತ ಎಸ್ ಎನ್ ಸಿದ್ದರಾಮಪ್ಪ ಆದೇಶ ಹೊರಡಿಸಿದ್ದಾರೆ.

ಹೈಕೋರ್ಟ್ ಈ ಸಂಬಂಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು, ಸರ್ಕಾರಕ್ಕೆ ಮತ್ತು ಪೊಲೀಸ್ ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತ್ತು. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ನಗರ ಪೊಲೀಸ್ ಆಯುಕ್ತ ಎಸ್ ಎನ್ ಸಿದ್ದರಾಮಪ್ಪ ಅವರು ಕಾಕತಿ ಸಿಪಿಐ ವಿಜಯಕುಮಾರ ಸಿನ್ನೂರ ಅವರನ್ನು ಅಮಾನತು ಮಾಡಿದ್ದಾರೆ.

ಬೆಳಗಾವಿಗೆ ಆಗಮಿಸಿದ ಕೇಂದ್ರ ಬಿಜೆಪಿ ತಂಡ: ಬಿಜೆಪಿ ಕೂಡ ಈ ಅಮಾನವೀಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಇಂದು ಬೆಳಗ್ಗೆ ದೆಹಲಿಯಿಂದ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಸಂಸದರಾದ ಅಫ್ರಜಿತಾ ಸಾರಂಗಿ, ಶ್ರೀಮತಿ ಸುನಿತಾ ದುಗ್ಗಲ್, ಲಾಕೆಟ್ ಚಟರ್ಜಿ, ರಂಜಿತಾ ಕೋಲಿ, ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಆಶಾ ಲಾಕ್ರ ಅವರ ನಿಯೋಗ ಆಗಮಿಸಿದೆ. ಈ ತಂಡ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತ ಮಹಿಳೆಯ ಆರೋಗ್ಯ ವಿಚಾರಿಸಿ ಧೈರ್ಯ ತುಂಬಲಿದ್ದು, ಬಳಿಕ ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಲಿದೆ.

ಹೆಚ್ಚಿನ ಸುದ್ದಿ