ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಂದ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರದಾನ
ಬೆಂಗಳೂರು, ಅಕ್ಟೋಬರ್ 19 : ಕರ್ನಾಟಕ ಸರ್ಕಾರದ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ವತಿಯಿಂದ ‘ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಹಾಗೂ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರದಾನ ಸಮಾರಂಭ-2026’ ಅನ್ನು 2026 ನೇ ಅಕ್ಟೋಬರ್ 26 ರ ಸೋಮವಾರದಂದು ವಿಧಾನಸೌಧದ ಬ್ಯಾಂಕ್ವೇಟ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಅಂದು ಬೆಳಿಗ್ಗೆ 10.00 ಗಂಟೆಗೆ ಶಾಸಕರ ಭವನದ ಮುಂಭಾಗದಲ್ಲಿರುವ ತಪೋವನದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಪ್ರತಿಮೆಗೆ ಸನ್ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ಲೋಕೋಪಯೋಗಿ ಇಲಾಖೆ ಸಚಿವರಾದ ಶ್ರೀ ಸತೀಶ್ ಜಾರಕಿಹೋಳಿ, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಟಿ. ರಘುಮೂರ್ತಿ ಹಾಗೂ ಇತರೆ ಸಚಿವರು ಸೇರಿದಂತೆ ಗಣ್ಯರು ಅಧಿಕಾರಿಗಳು
ಮಾಲಾರ್ಪಣೆ ಮಾಡಲಿರುವರು.
ನಂತರ ಬೆಳಿಗ್ಗೆ 10.30 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದ ವೇದಿಕೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮದ ಉದ್ಘಾಟನೆ ಮಾಡಿ “ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ -2026 ನ್ನು ಪ್ರದಾನ ಮಾಡಲಿರುವರು.
ಕಾರ್ಯಕ್ರಮದಲ್ಲಿ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದ ಜಗದ್ಗುರುಗಳಾದ ಡಾ. ಶ್ರೀ ಶ್ರೀ ಶ್ರೀ ಪ್ರಸನ್ನಾನಂದಪುರಿ ಮಹಾಸ್ವಾಮೀಜಿಯವರು ದಿವ್ಯ ಸಾನಿಧ್ಯ ವಹಿಸಲಿದ್ದು, ಉಪಮುಖ್ಯಮಂತ್ರಿಗಳಾದ ಡಾ. ಜಿ. ಪರಮೇಶ್ವರ ಕರ್ನಾಟಕ ವಿಧಾನಪರಿಷತ್ತಿನ ಮಾನ್ಯ ಸಭಾಪತಿಗಳಾದ ಶ್ರೀ ಸಲೀಂ ಅಹ್ಮದ್, ಕರ್ನಾಟಕ ವಿಧಾನಸಭೆಯ ಮಾನ್ಯ ಸಭಾಧ್ಯಕ್ಷರಾದ ಶ್ರೀ ಗುರುಪಾದಗೌಡ ಸಂಗನಗೌಡ ಪಾಟೀಲ್ ಅವರ ಘನ ಉಪಸ್ಥಿತಿಯಲ್ಲಿ, ಮಾನ್ಯ ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಶ್ರೀ ರಿಜ್ವಾನ್ ಅರ್ಷದ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ
ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಸಚಿವರಾದ, ಶ್ರೀ ಸತೀಶ ಜಾರಕಿಹೊಳಿ, ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಾದ
ಶ್ರೀ ಟಿ. ರಘುಮೂರ್ತಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಶ್ರೀ ಆರ್. ಅಶೋಕ್, ಕರ್ನಾಟಕ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ ಅವರು ವಿಶೇಷ ಅತಿಥಿಗಳಾಗಿ ಆಗಮಿಸಲಿದ್ದಾರೆ.
ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಅಧ್ಯಕ್ಷರಾದ ಶ್ರೀ ಬಸನಗೌಡ ದದ್ದಲ ಅವರ ಗೌರವ ಉಪಸ್ಥಿತಿಯಲ್ಲಿ ಕರ್ನಾಟಕ ಸರ್ಕಾರದ ಮಾನ್ಯ ಸಚಿವರುಗಳು, ಸಂಸದರು, ವಿಧಾನ ಸಭೆ ಮತ್ತು ವಿಧಾನ ಪರಿಷತ್ತಿನ ಶಾಸಕರುಗಳು ಹಾಗೂ ವಿವಿಧ ಆಯೋಗ ಮತ್ತು ನಿಗಮ ಮಂಡಳಿಗಳ ಅಧ್ಯಕ್ಷರುಗಳು ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್ ಭಾ.ಆ.ಸೇ., ಪರಿಶಿಷ್ಟ ಪಂಗಡಗಳ ಇವನ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ಶ್ರೀಮತಿ ಎಂ. ಕನಗವಲ್ಲಿ, ಭಾ.ಆ.ಸೇ., ಪರಿಶಿಷ್ಟ ಪಂಗಡಗಳ ಕಲ್ಯಾಣ ನಿರ್ದೇಶನಾಲಯದ ನಿರ್ದೇಶಕರಾದ ಡಾ. ಅಶೋಕ್ ಡಿ.ಆರ್. ಕ.ಆ.ಸೇ. ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಅಶೋಕ ದುಡಗುಂಟಿ, ಕ.ಆ.ಸೇ. ಉಪಸ್ಥಿತರಿರುವರು.

