KRGRV
Saturday, October 24, 2026
Homeಜಿಲ್ಲಾ ಸುದ್ದಿಗಳುಬೆಳಗಾವಿ ಚಳಿಗಾಲ ಅಧಿವೇಶನ-2026ರ ಅಧಿವೇಶನವು ಕಾರ್ಯವನ್ನು ಸಮನ್ವಯತೆಯಿಂದ ಕಾರ್ಯನಿರ್ವಹಿಸಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ....

ಬೆಳಗಾವಿ ಚಳಿಗಾಲ ಅಧಿವೇಶನ-2026ರ ಅಧಿವೇಶನವು ಕಾರ್ಯವನ್ನು ಸಮನ್ವಯತೆಯಿಂದ ಕಾರ್ಯನಿರ್ವಹಿಸಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ….

ಬೆಳಗಾವಿ: ಬೆಳಗಾವಿ ಜಿಲ್ಲೆಯ ಪ್ರಸಕ್ತ ಸಾಲಿನಲ್ಲಿ ನಡೆಯಲಿರುವ ವಿಧಾನಮಂಡಲ ಚಳಿಗಾಲ ಅಧಿವೇಶನವನ್ನು ಯಶಸ್ವಿಗೊಳಿಸಲು ಎಲ್ಲ ಇಲಾಖೆಯ ಅಧಿಕಾರಿಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸುವ ಮೂಲಕ ಅಧಿವೇಶನವನ್ನು ಅಚ್ಚುಕಟ್ಟಾಗಿ ನಡೆಸಲು ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಯಾದ ಶ್ರೀ ಮೊಹಮ್ಮದ್ ರೋಷನ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ‌ ಕಚೇರಿ ಸಭಾಂಗಣದಲ್ಲಿ ಬುಧವಾರ (ಅ.22) ಜರುಗಿದ ಚಳಿಗಾಲ ಅಧಿವೇಶನ-2026 ರ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಈ ಬಾರಿಯ ಚಳಿಗಾಲದ ಅಧಿವೇಶನ ಸಿದ್ಧತೆಗೆ ಸಮಯದ ಅವಕಾಶವಿದ್ದು, ಅಧಿವೇಶನ ಯಶಸ್ವಿಗಾಗಿ ಅಧಿಕಾರಿಗಳು ತಮ್ಮ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕೆಂದು ಹೇಳಿದರು.

ಅಧಿವೇಶನದ ಯಶಸ್ವಿಗಾಗಿ ಉಪ ಸಮಿತಿಗಳನ್ನು ರಚಿಸಲಾಗುವುದು. ಎಲ್ಲ ಅಧಿಕಾರಿಗಳು ತಮ್ಮ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸುವಂತೆ ತಿಳಿಸಿದರು.

ಅಧಿವೇಶನಕ್ಕೆ ಆಗಮಿಸುವ ಸಚಿವರು, ಗಣ್ಯರುಗಳಿಗೆ ಸೂಕ್ತ ವಸತಿ, ಊಟ ಹಾಗೂ ಸಾರಿಗೆ ವ್ಯವಸ್ಥೆಯನ್ನು ಒದಗಿಸಬೇಕು ಎಂದು ತಿಳಿಸಿದರು.

ಅಧಿವೇಶನಕ್ಕಾಗಿ ಆಗಮಿಸುವ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು, ಸಚಿವರುಗಳಿಗೆ ಶಿಷ್ಟಾಚಾರದಲ್ಲಿ ಯಾವುದೇ ಲೋಪವಾಗದಂತೆ ಸಂಬಂಧಿಸಿದ ಇಲಾಖಾ ಅಧಿಕಾರಿಗಳು ನಿಗಾವಹಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಅಧಿವೇಶನಕ್ಕೆ ಆಗಮಿಸುವ ಗಣ್ಯರುಗಳಿಗೆ ಸೂಕ್ತ ವಸತಿ ವ್ಯವಸ್ಥೆ ಒದಗಿಸಬೇಕು ಈ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳು ವಸತಿಗಾಗಿ ಗುರುತಿಸಲಾಗುವ ಹೊಟೇಲಗಳ ಮಾಲಿಕರೊಂದಿಗೆ ಚರ್ಚಿಸಿ ಕೊಠಡಿಗಳನ್ನು ಕಾಯ್ದಿರಿಸಲು ತಿಳಿಸಿದರು.

ಅಧಿವೇಶನದ ಸಂದರ್ಭದಲ್ಲಿ ಸುವರ್ಣ ಸೌಧದಲ್ಲಿ ಅಂತರ್ಜಾಲ ಸಂಪರ್ಕದಲ್ಲಿ ಯಾವುದೇ ಅಡೆತಡೆಗಳು ಆಗಬಾರದು.
ಗಣ್ಯರು, ಅಧಿಕಾರಿಗಳು, ಮಾಧ್ಯಮ ಪ್ರತಿನಿಧಿಗಳು ಸೇರಿದಂತೆ ಅಧಿವೇಶನಕ್ಕೆ ಆಗಮಿಸುವ ಸಿಬ್ಬಂದಿಗಳ ವಸತಿ‌ ಪ್ರದೇಶಗಳಲ್ಲಿ ತುರ್ತು ವೈದ್ಯಕೀಯ ತಂಡಗಳನ್ನು ನಿಯೋಜಿಸಬೇಕು ಎಂದರು.

ಒಟ್ಟಾರೆಯಾಗಿ ಪ್ರಸಕ್ತ ಸಾಲಿನ‌ ಚಳಿಗಾಲದ‌ ಅಧಿವೇಶನ ಸಂದರ್ಭದಲ್ಲಿ ಯಾವುದೇ ಲೋಪಗಳಿಗೆ ಆಸ್ಪದ‌ ನೀಡಬಾರದು ಎಂದು ಎಲ್ಲ ಇಲಾಖೆಯ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳು ತಮ್ಮ‌ ಜವಾಬ್ದಾರಿಗಳನ್ನು ಅರಿತು ಅಧಿವೇಶನ ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಸೂಚಿಸಿದರು.

ಸಭೆಯಲ್ಲಿ ಪೋಲಿಸ್ ಆಯುಕ್ತರಾದ ಪ್ರಕಾಶ ನಿಕಮ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ರಾಮರಾಜನ್. ಕೆ, ಪ್ರಶಿಕ್ಷಣಾರ್ಥಿ ಆಯ.ಎ.ಎಸ್. ಅಧಿಕಾರಿ ರೋಹಿತ್ ಸಿಂಗ್, ಅಪರ‌ ಜಿಲ್ಲಾಧಿಕಾರಿ ವಿಜಯಕುಮಾರ್ ಹೊನಕೇರಿ, ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ಸಂಪಾದಕರು: ರಾಮಚಂದ್ರಪ್ಪ ಪೂಜೇರ (ಚನ್ನಮ್ಮನ ಕಿತ್ತೂರು)

ಹೆಚ್ಚಿನ ಸುದ್ದಿ