KRGRV
Wednesday, August 19, 2026
Homeಬೆಂಗಳೂರುಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಇನ್ನಿಲ್ಲ

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಇನ್ನಿಲ್ಲ

ಬೆಂಗಳೂರು: ತಿಪಟೂರು ಕ್ಷೇತ್ರದ ಮಾಜಿ ಶಾಸಕರು ಮತ್ತು ರಾಜ್ಯದ ಮಾಜಿ ಶಿಕ್ಷಣ ಸಚಿವರೂ ಆದ ಶ್ರೀ ಬಿ.ಸಿ.ನಾಗೇಶ್ (65 ವರ್ಷ) ಅವರು ಇಂದು ರಾತ್ರಿ 9 ಗಂಟೆಗೆ ಬೆಂಗಳೂರಿನ ತಮ್ಮ ಮಗಳ ಮನೆಯಲ್ಲಿ ಮೃತಪಟ್ಟರು. ಅವರು ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದರು.
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಪೂರ್ಣಾವಧಿ ಕಾರ್ಯಕರ್ತರಾಗಿದ್ದ ಅವರು ಪ್ರಾಥಮಿಕ ಶಿಕ್ಷಣ ಸಚಿವರಾಗಿ ಬಿಜೆಪಿ ಆಡಳಿತಾವಧಿಯಲ್ಲಿ ಕಾರ್ಯ ನಿರ್ವಹಿಸಿದ್ದರು. ನಾಳೆ (19-8-2026) ಬೆಳಿಗ್ಗೆ 7 ಗಂಟೆಯಿಂದ 8 ಗಂಟೆಯವರೆಗೆ ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನ’ದಲ್ಲಿ ಪಾರ್ಥಿವ ಶರೀರದ ದರ್ಶನ ವ್ಯವಸ್ಥೆ ಇರುತ್ತದೆ. ತಿಪಟೂರಿನಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಸಂತಾಪ: ಬಿ.ಸಿ.ನಾಗೇಶ್ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಹೆಚ್ಚಿನ ಸುದ್ದಿ