KRGRV
Tuesday, December 24, 2024
HomeUncategorizedರಾಜ್ಯ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಹೃದಯಾಘಾತದಿಂದ ಸಾವು

ರಾಜ್ಯ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಹೃದಯಾಘಾತದಿಂದ ಸಾವು

ಬೆಂಗಳೂರು : ರಾಜ್ಯ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಇಂದು ಸಂಜೆ 6:40ರ ಸುಮಾರಿಗೆ ಹೃದಯಘಾತದಿಂದ ಅಂಬಿಕಾ ಪತಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಬೆಂಗಳೂರಿನ ಹೆಬ್ಬಾಳದ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಕೆಲವು ದಿನಗಳ ಹಿಂದೆ ಅಂಬಿಕಾಪತಿ ಮೇಲೆ ಮನೆ ಮೇಲೆ ಐಟಿ ದಾಳಿ ನಡೆಸಿತ್ತು. ಅಲ್ಲದೆ ಇದೇ ವೇಳೆ ಅಂಬಿಕಾ ಪತಿ ಮನೆಯಲ್ಲಿ 42 ಕೋಟಿ ಹಣ ಪತ್ತೆಯಾಗಿತ್ತು.

ಹೃದಯಾಘಾತದಿಂದ ಅಂಬಿಕಾ ಪತಿ ಕೊನೆಯುಸಿ ಬೆಳೆದಿದ್ದು ಕೆಲವು ದಿನಗಳ ಹಿಂದೆ ಐಟಿ ದಾಳಿ ನಡೆಸಿತ್ತು ಅಲ್ಲದೆ 23 ಬಾಕ್ಸ್ ಗಳಲ್ಲಿ ಕೋಟಿ ಕೋಟಿ 500 ಮುಖಬೆಲೆಯ ಕಂತೆ ಕಂತೆ ನೋಟುಗಳು ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ವಶಪಡಿ ವಿಚಾರಣೆ ನಡೆಸಲಾಗುತ್ತಿತ್ತು ಇದೀಗ ಹೃದಯಘಾತದಿಂದ ಅವರು ಮೃತಪಟ್ಟಿದ್ದಾರೆ.

ಹೆಚ್ಚಿನ ಸುದ್ದಿ