KRGRV
Sunday, December 22, 2024
Homeಜಿಲ್ಲಾ ಸುದ್ದಿಗಳುವಿಧಾನಸೌಧ ಮುಂಭಾಗದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಪುತ್ಥಳಿ ಸ್ಥಾಪನೆಗೆ ಸಿಎಂಗೆ ಯಶ್ಪಾಲ್ ಸುವರ್ಣ ಮನವಿ

ವಿಧಾನಸೌಧ ಮುಂಭಾಗದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಪುತ್ಥಳಿ ಸ್ಥಾಪನೆಗೆ ಸಿಎಂಗೆ ಯಶ್ಪಾಲ್ ಸುವರ್ಣ ಮನವಿ

ವಿಧಾನಸೌಧ ಮುಂಭಾಗದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಪುತ್ಥಳಿ ಸ್ಥಾಪನೆಗೆ ಸಿಎಂಗೆ ಯಶ್ಪಾಲ್ ಸುವರ್ಣ ಮನವಿ
ಉಡುಪಿ: ವಿಧಾನಸೌಧದ ಮುಂಭಾಗದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಪುತ್ಥಳಿ ನಿರ್ಮಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಮನವಿ ಮಾಡಿದ್ದಾರೆ.

ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ಸಂದೇಶವನ್ನು ವಿಶ್ವಕ್ಕೆ ಸಾರಿದ, ಸಮಾಜದಲ್ಲಿ ಜಾತಿ ಮತ ಭೇದವನ್ನು ವಿರೋಧಿಸಿ ಸಾಮಾಜಿಕ ಸಮಾನತೆಯನ್ನು ಪ್ರತಿಪಾದಿಸಿದ ಮಹಾನ್ ಚೇತನ ಬ್ರಹ್ಮಶ್ರೀ ನಾರಾಯಣ ಗುರುಗಳ ಚಿಂತನೆ ಸರ್ವರಿಗೂ ಸಾರ್ವಕಾಲಿಕ ಅದರ್ಶವಾಗಿದೆ.

ಶಿಕ್ಷಣ, ಉದ್ಯೋಗ ಮತ್ತು ಸಂಘಟನೆಯ ಮೂಲಕ ಸಮಾಜದ ಅಭಿವೃದ್ಧಿಯ ಆಶಯ ಹೊತ್ತು, ದಮನಿತ ಸಮುದಾಯಗಳ ಧ್ವನಿಯಾಗಿ ಮೂಢನಂಬಿಕೆಗಳ ವಿರುದ್ಧ ಜಾಗೃತಿ ಮೂಡಿಸಿದ ಬ್ರಹ್ಮಶ್ರೀ ನಾರಾಯಣ ಗುರುಗಳ ಸಂದೇಶವನ್ನು ಇಂದಿನ ಸಮಾಜಕ್ಕೆ ಪರಿಚಯಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ವಿವಿಧ ದಾರ್ಶನಿಕ ಮಹನೀಯರ ಪುತ್ಥಳಿಯ ಜೊತೆ ವಿಧಾನಸೌಧದಲ್ಲಿ ನಾರಾಯಣ ಗುರುಗಳ ಪುತ್ಥಳಿ ನಿರ್ಮಿಸಿ ಗೌರವ ಸಲ್ಲಿಸಬೇಕಾಗಿದೆ ಎಂದು ಮನವಿ ಮಾಡಿದ್ದಾರೆ.

ಹೆಚ್ಚಿನ ಸುದ್ದಿ