KRGRV
Sunday, December 22, 2024
Homeರಾಜಕೀಯಶಿಗ್ಗಾಂವಿಯಿಂದ ಯಾಸಿರ್ ಅಹ್ಮದ್ ಖಾನ್ ಪಠಾಣ್ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಶಿಗ್ಗಾಂವಿಯಿಂದ ಯಾಸಿರ್ ಅಹ್ಮದ್ ಖಾನ್ ಪಠಾಣ್ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು , ಅಕ್ಟೋಬರ್ 24 :

ಯಾಸಿರ್ ಅಹ್ಮದ್ ಖಾನ್ ಪಠಾಣ್ ಅವರನ್ನು ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪಕ್ಷದ ವರಿಷ್ಠರು ಆಯ್ಕೆ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.

ಚನ್ನಪಟ್ಟಣ ಕ್ಷೇತ್ರಕ್ಕೆ ನಿಖಿಲ್ ಕುಮಾರಸ್ವಾಮಿಯವರನ್ನು ಜೆಡಿಎಸ್ ಅಭ್ಯರ್ಥಿಯಾಗಿ ಆಯ್ಕೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಚನ್ನಪಟ್ಟಣ ಕ್ಷೇತ್ರಕ್ಕೆ ಬಿಜೆಪಿ ಅಥವಾ ಜೆಡಿಎಸ್ ನವರು ಯಾರನ್ನು ಅಭ್ಯರ್ಥಿಯಾಗಿ ಕಣಕ್ಕೆ ಇಳಿಸುತ್ತಾರೆಂಬುದು ನಮಗೆ ಮುಖ್ಯವಲ್ಲ. ನಮ್ಮ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ ಅವರು ಚನಪಟ್ಟಣ ಕ್ಷೇತ್ರದಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದರು.

ಹೆಚ್ಚಿನ ಸುದ್ದಿ