- ಎಸ್‌ಸಿಎಸ್‌ಪಿ/ಟಿಎಸ್‌ಪಿ ಯೋಜನೆಯಡಿ ಫಲಾನುಭವಿಗಳಿಗೆ ಮೊಬೈಲ್ ಕ್ಯಾಂಟೀನ್ ವಿತರಣೆ
ಶಿವಮೊಗ್ಗ, ಅ.31 ಜಿಲ್ಲಾ ಆಯುಷ್ ಇಲಾಖೆ ಶಿವಮೊಗ್ಗ ಹಾಗೂ ಸರ್ಕಾರಿ ಆಯುರ್ವೇದ ಬೋಧನಾ ಆಸ್ಪತ್ರೆಯ ಜಿಲ್ಲಾ ಆಯುಷ್ ಅಧಿಕಾರಿಗಳ ನೂತನ ಕಟ್ಟಡವನ್ನು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಮಧು ಬಂಗಾರಪ್ಪ ಅವರು ಇಂದು ಉದ್ಘಾಟಿಸಿದರು.
ಶಿವಮೊಗ್ಗದ ಸರ್ಕಾರಿ ಆಯುರ್ವೇದ ಬೋಧನಾ ಆಸ್ಪತ್ರೆಯ ವಿದ್ಯಾರ್ಥಿನಿಯರ ವಸತಿನಿಲಯದ ಆವರಣದಲ್ಲಿ ನೂತನ ಕಟ್ಟಡವನ್ನು ನಿರ್ಮಿಸಲಾಗಿದ್ದು, ಸಚಿವರು ಕಟ್ಟಡವನ್ನು ಉದ್ಘಾಟಿಸಿ ಇಲಾಖೆಯ ಕಾರ್ಯಚಟುವಟಿಕೆಗಳಿಗೆ ಚಾಲನೆ ನೀಡಿದರು.
ಬಳಿಕ ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಎಸ್‌ಸಿಎಸ್‌ಪಿ/ಟಿಎಸ್‌ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಮೊಬೈಲ್ ಕ್ಯಾಂಟೀನ್‌ಗಳನ್ನು ವಿತರಿಸಿದರು.
ಈ ಯೋಜನೆಯ ಮೂಲಕ ಅರ್ಹ ಫಲಾನುಭವಿಗಳಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಹಾಗೂ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮೊಬೈಲ್ ಕ್ಯಾಂಟಿನ್ ಗಳು ನೆರವಾಗಲಿವೆ.

