ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಶಾಸಕರು, ಸಂಸದರು ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು.
ಈ ವೇಳೆ ಮಾತನಾಡಿದ ಬಿ.ವೈ.ವಿಜಯೇಂದ್ರ, ರಾಜ್ಯಪಾಲರ ವಿರುದ್ಧ ದಬ್ಬಾಳಿಕೆ ಮಾಡೋದು ಬಿಟ್ಟು ಸಿಎಂ ತಮ್ಮ ಸ್ಥಾನಕ್ಕೆ ಕೂಡಲೇ ರಾಜೀನಾಮೆ ಕೊಡಬೇಕು. ತಮ್ಮ ಬೆಂಬಲಕ್ಕೆ ಸಚಿವರು, ಶಾಸಕರು ನಿಲ್ಲುತ್ತಾರೆ ಎನ್ನೋ ಭಂಡತನ ಬಿಡಿ. ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಹೊರ ಬನ್ನಿ ಎಂದು ಆಗ್ರಹಿಸಿದ್ರು.