ಬೆಂಗಳೂರು: ರಾಜ್ಯದಲ್ಲಿ ಸಿಬಿಐ ಮುಕ್ತ ತನಿಖೆಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.
ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದಲ್ಲಿ ಸಿಬಿಐ ಮುಕ್ತ ತನಿಖೆಗೆ ಅನುಮತಿಯನ್ನು ಹಿಂತೆಗೆದುಕೊಂಡು ಮಹತ್ವದ ತೀರ್ಮಾನ ಮಾಡಲಾಗಿದೆ.
ದೆಹಲಿ ಪೊಲೀಸ್ ಎಸ್ಟಾಬ್ಲಿಷ್‌ಮೆಂಟ್ ಆಕ್ಟ್ ಅಡಿಯಲ್ಲಿ ಕರ್ನಾಟಕದಲ್ಲಿ ಸಿಬಿಐ ಮುಕ್ತ ತನಿಖೆಗೆ ಅವಕಾಶ ಕಲ್ಪಿಸಲಾಗಿತ್ತಿ. ಇದೀಗ ಈ ಹಿಂದೆ ಹೊರಡಿಸಲಾಗಿದ್ದ ಸಿಬಿಐ ಮುಕ್ತ ತನಿಖೆಯ ಅಧಿಸೂಚನೆಯನ್ನು ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಇನ್ನು ಮುಂದೆ ಸಿಬಿಐ ಅಧಿಕಾರಿಗಳು ರಾಜ್ಯದಲ್ಲಿ ಯಾವುದೇ ಪ್ರಕರಣದ ತನಿಖೆ ನಡೆಸಬೇಕಾದರೆ ರಾಜ್ಯ ಸರ್ಕಾರದ ಅನುಮತಿ ಪಡೆದುಕೊಂಡೇ ಮುಂದುವರೆಯಬೇಕಿದೆ.
ಮುಡಾ ಹಗರಣದಲ್ಲಿ ಸಿಬಿಐ ತನಿಖೆ ಹೊಡೆತದಿಂದ ತ್ಪಿಸಿಕೊಲ್ಳಲು ಸಿಎಂ ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ